ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ರದ್ದು : ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ

ಶಕ್ತಿನಗರದ ಶ್ರೀಗೋಪಾಲಕೃಷ್ಣ ದೇವಸ್ಥಾನದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ರದ್ದುಗೊಳಿಸಿ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂಜಾ ಕಾರ್ಯಕ್ರಮವು ನಡೆಯಲಿದೆ

ಮಂಗಳೂರು ಏ. 18 : ಶಕ್ತಿನಗರದ ಈ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಏಪ್ರಿಲ್ 18 ರಿಂದ ಏಪ್ರಿಲ್ 25 ರ ತನಕ ಹಮ್ಮಿಕೊಂಡಿದ್ದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂಜಾ ಕಾರ್ಯಕ್ರಮವನ್ನು ಸರ್ಕಾರದ ಕೋವೀಡ್ ನಿಯಾಮಾವಳಿಯ ಪ್ರಕಾರ ಸಾಮಾಜಿಕ ಅಂತರ ಕಾಯ್ದುಕೊಂಡು ನಡೆಸಲು ಸಮಿತಿಯು ತಿರ್ಮಾನಿಸಿರುತ್ತದೆ.

ಸಾಮಾಜಿಕ ಅಂತರ, ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಜ್ವರದ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಸ್ವಚ್ಛತೆಗೆ ಅದ್ಯತೆ ನೀಡಲಾಗಿದೆ. ಕೇವಲ ಪೂಜಾ ವಿಧಿ-ವಿಧಾನಗಳು ಮಾತ್ರ ನಡೆಯಲಿದೆ. ಈ ನಿಯಾಮಾವಳಿಯನ್ನು ಪಾಲನೆ ಮಾಡದವರಿಗೆ ದೇವಾಲಯದ ಒಳಗೆ ಪ್ರವೇಶವಿರುವುದಿಲ್ಲ.

ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ರದ್ದು
ಏಪ್ರಿಲ್ ೧೮ ರಿಂದ ೨೫ರ ತನಕ ನಡೆಯಲಿರುವ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ರದ್ದುಗೊಳಿಸಲು ಇಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಮೊನಪ್ಪ ಭಂಡಾರಿಯವರ ಅಧ್ಯಕ್ಷತೆಯ ಸಭೆಯು ತಿರ್ಮಾನಿಸಿದೆ. ಸರ್ಕಾರದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುವುದು. ಭಕ್ತಾಧಿಗಳು ಸಹಕರಿಸಬೇಕಾಗಿ ಸಭೆಯಲ್ಲಿ ತಿರ್ಮಾನಿಸಲಾಗಿದೆ.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಞರಾದ ಶ್ರೀ ಮೊನಪ್ಪ ಭಂಡಾರಿ, ಪ್ರಧಾನ ಕಾರ್ಯದರ್ಶಿ ಹೆಚ್.ಕೆ.ಪುರುಷೋತ್ತಮ್, ಆಡಳಿತ ಮೊಕ್ತೇಸರಾದ ಶ್ರೀ ಕೆ.ಸಿ.ನಾೖಕ್, ಸ್ಥಳೀಯ ಮಹಾನಗರಪಾಲಿಕೆ ಸದಸ್ಯೆರಾದ ವನಿತಾ ಪ್ರಸಾದ್, ಶಕೀಲಾ ಕಾವ ಉಪಸ್ಥಿತರಿದ್ದರು.