ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶಕ್ತಿನಗರದಲ್ಲಿ ದಿನಾಂಕ 27-08-2025 ರಂದು ಶ್ರೀ ಗಣೇಶ ಚತುರ್ಥಿಯ ನಿಮಿತ್ತ ನೂರ ಎಂಟು ನಾರಿಕೇಳ ಗಣಪತಿ ಹವನ.
ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ದಿನಾಂಕ 27-8-2025 ರಂದು ಶ್ರೀ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ. ಅಂದು ಬೆಳಿಗ್ಗೆ 10.30 ರಿಂದ ಲೋಕಕಲ್ಯಾಣಾರ್ಥವಾಗಿ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಮಾರ್ಗದರ್ಶನದಲ್ಲಿ 108 ನಾರಿಕೇಳ ಗಣಪತಿ ಹವನ ನಡೆಯಲಿದೆ. ಬೆಳಿಗ್ಗೆ 11.30 ಕ್ಕೆ ಗಣಪತಿ ಹವನದ ಪೂರ್ಣಾಹುತಿ ಹಾಗೂ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ.
ಅಂದು ಮಧ್ಯಾಹ್ನ 12.30 ಕ್ಕೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ. ಈ ದೇವತಾ ಕಾರ್ಯದಲ್ಲಿ ಭಗವದ್ಭಕ್ತರೆಲ್ಲರೂ ಪಾಲ್ಗೊಳ್ಳಬೇಕೆಂದು ವಿನಂತಿ.

