ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೂತನ ಸಂಸದರ ಭೇಟಿ

ದಿನಾಂಕ 20-6-2024 ಗುರುವಾರದಂದು ಶ್ರೀ ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ 2024 ರ ಲೋಕಸಭಾ ಚುನಾವಣೆಯಲ್ಲಿ ನೂತನವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾಗಿ ಚುನಾಯಿತರಾದ ಕ್ಯಾ. ಬ್ರಿಜೇಶ್ ಚೌಟ ಆಗಮಿಸಿದರು. ಸಂಸದರಾಗಿ ಆಯ್ಕೆಯಾದ ನಂತರ ಪ್ರಥಮ ಬಾರಿಗೆ ಆಗಮಿಸಿದ ಕ್ಯಾ. ಬ್ರಿಜೇಶ್ ಚೌಟರನ್ನು ಕ್ಷೇತ್ರದ ಆಡಳಿತ ಮೊಕ್ತೇಸರರಾದ ಡಾ. ಕೆ. ಸಿ ನಾೖಕ್‌ ಮತ್ತು ಭಕ್ತಾದಿಗಳು ಸ್ವಾಗತಿಸಿದರು, ಸಪರಿವಾರ ಶ್ರೀ ಗೋಪಾಲಕೃಷ್ಣ ದೇವರ ದರ್ಶನ ಪಡೆದ ನೂತನ ಸಂಸದರು ಪ್ರಸಾದ ಸ್ವೀಕರಿಸಿದರು.

ಕ್ಷೇತ್ರದ ಪರವಾಗಿ ಆಡಳಿತ ಮೊಕ್ತೇಸರರಾದ ಡಾ. ಕೆ. ಸಿ. ನಾೖಕ್‌ ಅವರು ಶಾಲು ಹೊದಿಸಿ ಶ್ರೀ ದೇವರ ಪ್ರಸಾದವನ್ನು ನೀಡುವುದರ ಮೂಲಕ ಗೌರವಿಸಿದರು. ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀ ಮೋನಪ್ಪ ಭಂಡಾರಿ, ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾಧ್ಯಕ್ಷರಾದ ಹೆಚ್.ಕೆ ಪುರುಷೋತ್ತಮ್, ಶಕ್ತಿ ಸಂಸ್ಥೆಯ ಪ್ರಧಾನ ಸಲಹೆಗಾರರಾದ ರಮೇಶ್.ಕೆ. ಹಿಂದೂ ಜಾಗರಣಾ ವೇದಿಕೆಯ ಪ್ರಮುಖರು ಹಾಗೂ ವಕೀಲರಾದ ಹರೀಶ್ ಮತ್ತು ಹರ್ಷಿತ್, ಬಿಜೆಪಿ ದಕ್ಷಿಣ ಮಂಡಲ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಸ್ಥಳೀಯ ಕಾರ್ಪರೇಟರ್‌ಗಳಾದ ಶ್ರೀಮತಿ ವನಿತಾ ಪ್ರಸಾದ್, ಕಿಶೋರ್ ಕೊಟ್ಟಾರಿ, ಶ್ರೀಮತಿ ಶಕೀಲಾ ಕಾವ, ವಕೀಲರಾದ ಮಹೇಶ್ ಜೋಗಿ, ದೇವಸ್ಥಾನದ ಆಡಳಿತಾಧಿಕಾರಿ ಆದೀಶ್.ಕೆ ಮತ್ತು ಅನೇಕ ಭಕ್ತಾದಿಗಳು ಉಪಸ್ಥಿತರಿದ್ದರು.